ಹೊಸದಿಗಂತ ಚಿಕ್ಕಮಗಳೂರು :
ಕೊಪ್ಪ ಪಟ್ಟಣದ ವಸತಿ ಶಾಲೆಯಲ್ಲಿ 15 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಪ್ಪ ತಾಲ್ಲೂಕಿನ ಬೊಮ್ಲಾಪುರ ಗ್ರಾಮದ ವಿದ್ಯಾರ್ಥಿನಿ 6 ನೇ ತರಗತಿಯಿಂದಲೂ ಮೊರಾರ್ಜಿ ಶಾಲೆಯಲ್ಲೇ ಓದುತ್ತಿದ್ದಳು. ಕಳೆದ ರಾತ್ರಿ ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾಗಿದ್ದಾಳೆ.
ಬೆಳಗಿನ ಜಾವ ಮಕ್ಕಳು ಎದ್ದಾಗ ಆಘಾತಗೊಂಡು ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ. ಸಾವಿಗೆ ನಿಖರ ಕಾರಣ ಗೊತ್ತಾಗದೆ ಇರುವ ಕಾರಣ ಕೊಪ್ಪ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.