ಹೊಸದಿಗಂತ ಡಿಜಿಟಲ್ ಡೆಸ್ಕ್:
ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬಂಗಾಳಿ ಭಾಷೆಗಳನ್ನು “ಶಾಸ್ತ್ರೀಯ” ಎಂದು ಗುರುತಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ .
ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕೇಂದ್ರ ಸಚಿವ ಸಂಪುಟ ಬಳಿಕ ಮಾಹಿತಿ ನೀಡಿದ್ದು, ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬಂಗಾಳಿ ಭಾಷೆಗಳನ್ನು ಪ್ರತಿಷ್ಠಿತ ವಿಭಾಗದಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಪ್ರಧಾನಿ ಮೋದಿಯವರು ಯಾವಾಗಲೂ ಭಾರತೀಯ ಭಾಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ.ಇಂದು ಐದು ಭಾಷೆಗಳು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬಂಗಾಳಿಯನ್ನು ಶಾಸ್ತ್ರೀಯ ಭಾಷೆಗಳಾಗಿ ಅಂಗೀಕರಿಸಲಾಗಿದೆ ಎಂದು ಹೇಳಿದರು.
ಈ ಭಾಷೆಗಳು ಈಗಾಗಲೇ ಶಾಸ್ತ್ರೀಯವೆಂದು ಗುರುತಿಸಲ್ಪಟ್ಟಿರುವ ಇತರ ಆರು ಭಾಷೆಗಳಾದ ತಮಿಳು, ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾದ ಪಟ್ಟಿಗೆ ಸೇರಲಿದೆ.
ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಅಸ್ಸಾಂ ಸಿಎಂ
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಸ್ಸಾಮಿಯನ್ನು ಶಾಸ್ತ್ರೀಯ ಭಾಷೆಯಾಗಿ ಸೇರ್ಪಡೆ ಮಾಡಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ‘ಅಸ್ಸಾಮಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನವನ್ನು ನೀಡುವ ಐತಿಹಾಸಿಕ ನಿರ್ಧಾರಕ್ಕಾಗಿ ಅಸ್ಸಾಂನ ಜನರ ಪರವಾಗಿ ನಾನು ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಜಿ ಮತ್ತು ಇಡೀ ಕೇಂದ್ರ ಸಚಿವ ಸಂಪುಟಕ್ಕೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ’ ಎಂದು ಶರ್ಮಾ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.