ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ: ವಿದ್ಯಾರ್ಥಿಯೊಬ್ಬನಿಗೆ ಚಾಕು ಇರಿದ ಸಹಪಾಠಿ

ಹೊಸದಿಗಂತ ವರದಿ ಬೆಳಗಾವಿ: ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, 17 ವರ್ಷದ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿ ಚಾಕುವಿನಿಂದ ಇರಿದ ಘಟನೆ ಮಂಗಳವಾರ ನಗರದ ಗೋಮಟೇಶ ವಿದ್ಯಾಪೀಠ ಕಾಲೇಜಿನಲ್ಲಿ ನಡೆದಿದೆ. ಡಿಪ್ಲೊಮಾ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ನಡುವೆ ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರವಾಗಿ ಮಾತಿನ ಚಕಮಕಿ ನಡೆದಿದೆ. ಈ ವೇಳೆ ವಿದ್ಯಾರ್ಥಿಯೊಬ್ಬ ಮತ್ತೋರ್ವ ವಿದ್ಯಾರ್ಥಿಯ ಭುಜಕ್ಕೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಇದನ್ನೂ ಓದಿ: ಚಾಕು ಇರಿತದಿಂದ ಗಾಯಗೊಂಡ ವಿದ್ಯಾರ್ಥಿಯನ್ನು ಕೂಡಲೇ ಬೆಳಗಾವಿಯ … Continue reading ತರಗತಿಯಲ್ಲಿ ಕುಳಿತುಕೊಳ್ಳುವ ವಿಚಾರಕ್ಕೆ ಗಲಾಟೆ: ವಿದ್ಯಾರ್ಥಿಯೊಬ್ಬನಿಗೆ ಚಾಕು ಇರಿದ ಸಹಪಾಠಿ