ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆಗೆ (CLAT 2024) ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳಿಂದ ಈ ಮುಂಚೆ ನವೆಂಬರ್ 3,2023ರೊಳಗೆ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ಇದೀಗ ಅರ್ಜಿ ಸಲ್ಲಿಕೆಯ ಅವಧಿಯನ್ನು ನವೆಂಬರ್ 10,2023ರ ವರೆಗೆ ವಿಸ್ತರಿಸಲಾಗಿದೆ.
CLAT 2024 ಪರೀಕ್ಷೆ: ಭಾರತದ ಉನ್ನತ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಮತ್ತು ಹಲವಾರು ಅಂಗಸಂಸ್ಥೆ ಕಾಲೇಜುಗಳಲ್ಲಿ UG ಮತ್ತು PG ಕಾನೂನು ಕಾರ್ಯಕ್ರಮಗಳಿಗೆ ಪ್ರವೇಶ ಪಡೆಯಲು CLAT ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಾಮಾನ್ಯ ಕಾನೂನು ಪ್ರವೇಶ ಪರೀಕ್ಷೆ (CLAT) 2024 ಅನ್ನು ಡಿಸೆಂಬರ್ 3,2023ರಂದು ನಡೆಸುತ್ತದೆ.