ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಪ್ರಕರಣದಲ್ಲಿ ಆರ್‌ಆರ್ ನಗರದ ಬಿಜೆಪಿ ಶಾಸಕ ಮುನಿರತ್ನಗೆ ಕ್ಲೀನ್ ಚಿಟ್ ದೊರೆತಿದೆ.
ಈ ಕೇಸ್ ಬಗ್ಗೆ ಸಂಪೂರ್ಣ ತನಿಖೆ ನಡೆಸಿದ ಪೊಲೀಸರು ಕೋರ್ಟ್ಗೆ ಬಿ ರಿಪೋರ್ಟ್ (B Report) ಸಲ್ಲಿಸಿದ್ದಾರೆ. ಶಾಸಕ ಮುನಿರತ್ನ ಈ ಆರೋಪದಿಂದ ಮುಕ್ತರಾಗಿದ್ದಾರೆ.
ಬಿ ರಿಪೋರ್ಟ್ ಸಲ್ಲಿಕೆಯಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಮುನಿರತ್ನ, ‘ಬಿ ರಿಪೋರ್ಟ್ ಸತ್ಯಕ್ಕೆ ಸಂದ ಜಯವಾಗಿದೆ. ಕಂಡೋರ ಹೆಣ್ಣು ಮಕ್ಕಳಿಂದ ಕಂಪ್ಲೀಟ್ ಕೊಡಿಸೋದನ್ನು ಬಿಡಬೇಕು’ ಎಂದು ಹೇಳಿದ್ದಾರೆ.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮಂಜುನಾಥ್ ಗೆದ್ದ ನಂತರ ಮತ್ತು ಡಿಕೆ ಸುರೇಶ್ ಹಾಗೂ ಕುಸುಮಾ ಸೋತ ನಂತರ ತಮ್ಮ ವಿರುದ್ಧ ಅತ್ಯಾಚಾರ ಕೇಸ್‌ಗಳು ಹೆಚ್ಚಾಗಿವೆ ಎಂದು ಆರೋಪಿಸಿದ್ದಾರೆ.’ಯಾರಿಗೆ ಯಾವುದು ಶಾಶ್ವತವಲ್ಲ, ನಾನು ಎಲ್ಲವನ್ನು ದೇವರಿಗೆ ಬಿಟ್ಟಿದ್ದೇನೆ’ ಎಂದು ತಿಳಿಸಿರುವ ಅವರು, ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.