ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣಗಲ್ಲಿ ನಾಗೇಂದ್ರ ಅವರ ತಪ್ಪಿಲ್ಲವೆಂದು ಸಾಬೀತಾದರೆ ಸಂಪುಟಕ್ಕೆ ಮರಳಿ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಬುಧವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ವಾಪಸ್ ಸೇರ್ಪಡೆ ಮಾಡುವ ಕುರಿತಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದರು.
ಪ್ರಕರಣದಲ್ಲಿ ಕ್ಲೀನ್ ಚಿಟ್ ಸಿಕ್ಕ ನಂತರ ನಾಗೇಂದ್ರ ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ, ಸಚಿವ ಸಂಪುಟ ಪುನಾರಚನೆ ಬಗ್ಗೆ ನನಗೆ ತಿಳಿದಿಲ್ಲ, ಈ ಬಗ್ಗೆ ಸಿಎಂ ಹಾಗೂ ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
ದರ್ಶನ್ ವಿರುದ್ಧ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಕೆ ವಿಳಂಬ ಆಗಿರುವ ವಿಚಾರವಾಗಿ ಮಾತನಾಡಿ, ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ. ಯಾವಾಗ ತೀರ್ಮಾನ ಮಾಡಬೇಕು ಎಂಬ ಬಗ್ಗೆ ಗೃಹ ಇಲಾಖೆ ಕಾರ್ಯದರ್ಶಿಗಳು ತೀರ್ಮಾನ ಕೈಗೊಳ್ಳುತ್ತಾರೆ. ನಾನೂ ಕೂಡಾ ಅವರಿಗೆ ಮೇಲ್ಮನವಿ ಗೆ ಹೋಗುವುದಾದರೆ ಹೋಗಿ ಅಂತ ಹೇಳಿದ್ದೇನೆ ಎಂದು ತಿಳಿಸಿದರು.