ಬೆಂಗಳೂರಿನಲ್ಲಿ ವಾಲಿದ 6 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ ಬೀಳುವ ಹಂತದಲ್ಲಿದ್ದ ಮತ್ತೊಂದು ಅನಧಿಕೃತ ಕಟ್ಟಡದ ತೆರವು ಕಾರ್ಯಾಚರಣೆ ಆರಂಭವಾಗಿದೆ.

ಮಹಾದೇವಪುರ ವಲಯದ ಹೊರಮಾವಿನ ನಂಜಪ್ಪ ಗಾರ್ಡನ್‌ನಲ್ಲಿ ಪುಟ್ಟಪ್ಪ ಎಂಬವರು 10*25 ಅಡಿಯಲ್ಲಿ ಜಾಗದಲ್ಲಿ 6 ಅಂತಸ್ತಿನ ಕಟ್ಟಡವನ್ನು ನಿರ್ಮಿಸಿದ್ದರು.ವಾಲಿಕೊಂಡಿರುವ ಕಟ್ಟಡವನ್ನು ತೆರವುಗೊಳಿಸಲು ಬಿಬಿಎಂಪಿ ಸೂಚನೆ ನೀಡುತ್ತಿದ್ದಂತೆ ಸ್ವಯಂಪ್ರೇರಿತವಾಗಿ ಮಾಲೀಕರೇ ಈಗ ಕಟ್ಟಡ ತೆರವು ಮಾಡಲು ಮುಂದಾಗಿದ್ದಾರೆ.

ಕಟ್ಟಡ ತೆರವು ಮಾಡದಿದ್ದರೆ ಕ್ರಿಮಿನಲ್‌ ಕೇಸ್‌ ಹಾಕುವ ಎಚ್ಚರಿಕೆಯನ್ನು ಪಾಲಿಕೆ ನೀಡಿತ್ತು. ಈ ಬೆನ್ನಲ್ಲೇ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ಮಾಲೀಕರೇ ಈ ಕಟ್ಟಡವನ್ನು ತೆರವು ಮಾಡಲು ಮುಂದಾಗಿದ್ದಾರೆ. ಅಕ್ಕಪಕ್ಕದಲ್ಲಿ ಮನೆಗಳು ಇರುವ ಕಾರಣ ಈಗ ಕೆಲಸಗಾರರು ಸುತ್ತಿಗೆಯಿಂದ ಬಡಿದು ಕಟ್ಟಡವನ್ನು ಒಡೆಯುತ್ತಿದ್ದಾರೆ. ಮೇಲ್ಭಾಗ ಕಟ್ಟಡ ತೆರವು ಮುಗಿದ ಬಳಿಕ ಜೆಸಿಬಿ ಮೂಲಕ ಕಾರ್ಯಾಚರಣೆ ಮಾಡಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!