ಹೊಸದಿಗಂತ ಆನ್ಲೈನ್ ಡೆಸ್ಕ್:
ಚಿತ್ರ ಮಂದಿರಗಳಲ್ಲಿ ಶೇ.100ರಷ್ಟು ಸೀಟು ಭರ್ತಿ ಮಾಡಬೇಕು ಎಂದು ಕನ್ನಡ ಚಿತ್ರರಂಗದ ನಿರ್ಮಾಪಕರು ಮನವಿ ಮಾಡಿದ್ದಾರೆ.
ಆರೋಗ್ಯ ಸಚಿವ ಸುಧಾಕರ್ ಅವರನ್ನು ಭೇಟಿ ಮಾಡಿ, ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಶೇ.100ರಷ್ಟು ಸೀಟು ಭರ್ತಿ ಮಾಡಿ ಎಂದು ಮನವಿ ಮಾಡಿದ್ದಾರೆ.
ಈಗ ಶೇ.50 ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ಇದೆ. ಈ ಕಾರಣದಿಂದ ಸಿನಿಮಾ ರಿಲೀಸ್ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದೇವೆ. ನಾವು ಕೂಡ ಸಂಕಷ್ಟದಲ್ಲಿದ್ದೇವೆ ಎಂದು ಮನವಿ ಮಾಡಿದ್ದಾರೆ.
ಈ ಬಗ್ಗೆ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ತಾಂತ್ರಿಕ ಪರಿಣಿತರ ಜೊತೆ ದೂರವಾಣಿ ಮೂಲಕ ಮಾತನಾಡಿದ್ದೇವೆ. ಸಂಪೂರ್ಣ ಸೀಟು ಭರ್ತಿಗೆ ಅವಕಾಶ ಸಿಗಬಹುದು ಎಂಬ ಆಶಾಭಾವನೆಯಿದೆ ಎಂದಿದ್ದಾರೆ.