ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೋವಿಡ್ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ದೇಶದಲ್ಲಿ ಲಸಿಕೀಕರಣ ಮುಂದುವರಿದಿದ್ದು,
ಜನ ಲಸಿಕೆ ಹಾಕಿಸಿಕೊಳ್ಳಲು ಉತ್ಸಾಹದಿಂದಲೇ ಮುಂದಾಗಿದ್ದು, ಇದುವರೆಗೆ ದೇಶದಲ್ಲಿ ಲಸಿಕೆ ಪಡೆದುಕೊಂಡವರ ಸಂಖ್ಯೆ 83,39,90,049ಕ್ಕೆ ಏರಿಕೆಯಾಗಿದೆ.
ಒಂದೆಡೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದರೆ, ಇನ್ನೊಂದೆಡೆ ಕೊರೋನಾ ಮಟ್ಟಹಾಕಲು ಲಸಿಕಾ ಅಭಿಯಾನವೂ ಸಮರೋಪಾದಿಯಲ್ಲಿ ಸಾಗಿದೆ. ಕರ್ನಾಟಕದಲ್ಲಿ ಈವರೆಗೂ 5,37,23,356 ಮಂದಿ ಲಸಿಕೆ ಪಡೆದಿದ್ದು, 3,81,80,741 ಮಂದಿ ಮೊದಲ ಡೋಸ್ ಪಡೆದಿದ್ದಾರೆ. 1,55,42,615 ಮಂದಿ ಎರಡನೇ ಡೋಸ್ ಪಡೆದಿದ್ದಾರೆ.