Saturday, August 13, 2022

Latest Posts

ಇಂದು ರಾಜ್ಯದ ಹಲವೆಡೆ ವರುಣನ ಅಬ್ಬರ: ಯಾವ ಜಿಲ್ಲೆಗಳಲ್ಲಿ ಭಾರಿ ಮಳೆ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೆ. 12ರವರೆಗೆ ಮಳೆ ಸುರಿಯಲಿದೆ.
ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಸೆ. 12ರವರೆಗೂ ವರುಣನ ಆರ್ಭಟ ಮುಂದುವರೆಯುವ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.
ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss