Friday, July 1, 2022

Latest Posts

ಕೊಡಗು| 68 ಹೊಸ ಕೋವಿಡ್ ಪ್ರಕರಣ ದೃಢ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ ಕೊಡಗು:

ಕೊಡಗು ಜಿಲ್ಲೆಯಲ್ಲಿ ಭಾನುವಾರ 68 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಡಿವೆ.
ಮಡಿಕೇರಿ ತಾಲೂಕಿನಲ್ಲಿ 35 ಸೋಮವಾರಪೇಟೆ ತಾಲೂಕಿನಲ್ಲಿ 22 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 11 ಕೊರೋನಾ ಪ್ರಕರಣಗಳು ವರದಿಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 33,196ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 68 ಮಂದಿ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕು‌ ಮುಕ್ತರಾದವರ ಸಂಖ್ಯೆ 32,244 ರಷ್ಟಾಗಿದೆ.
ಜಿಲ್ಲೆಯಲ್ಲಿ ಪ್ರಸಕ್ತ 545 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 407 ಮಂದಿ ಸೋಂಕಿಗೆ ಬಲಿಯಾಗಿದ್ದು, 90 ಕಂಟೈನ್ ಮೆಂಟ್ ವಲಯಗಳಿವೆ.ಪಾಸಿಟಿವಿಟಿ ದರ ಶೇ. 1.44ರಷ್ಟಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss