ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದೆ. ಆದ್ರೆ ಕಾಲೇಜುಗಳನ್ನು ಮುಚ್ಚುವುದು ಒಂದು ದೊಡ್ಡ ಪ್ರಕ್ರಿಯೆ ಅದು ಅಷ್ಟು ಸುಲಭದ ಕೆಲಸ ಅಲ್ಲ ಎಂದು ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಭಾವಿಸಿದಂತೆ ಸ್ಥಾಪಿತ ವಿಶ್ವವಿದ್ಯಾಲಯಗಳನ್ನು ಮುಚ್ಚುವುದು ಸಾಧ್ಯವಿಲ್ಲ. ವಿಶ್ವವಿದ್ಯಾಲಯಗಳ ಮುಚ್ಚುವಿಕೆಯ ಕುರಿತು ತಜ್ಞರ ಸಮಿತಿಯ ವರದಿಯನ್ನ ಸಾರ್ವಜನಿಕಗೊಳಿಸಿ ಎಂದರು.
ವಿಶ್ವವಿದ್ಯಾಲಯಗಳ ಕಾರ್ಯನಿರ್ವಹಣೆಗೆ 342 ಕೋಟಿ ರೂ. ಅಗತ್ಯವಿದೆ ಎಂದು ಹೇಳುವ ವರದಿಯನ್ನು ಅವ್ರಿಗೆ ಯಾರು ನೀಡಿದ್ರು? ಉನ್ನತ ಶಿಕ್ಷಣ ಸಚಿವರು ಈ ವಿಶ್ವವಿದ್ಯಾಲಯಗಳಿಗೆ ಭೇಟಿ ನೀಡಿ ಅವು ಕಾರ್ಯನಿರ್ವಹಿಸುತ್ತಿರುವ ರೀತಿಯನ್ನು ಪರಿಶೀಲಿಸಿದ್ದಾರೆಯೇ ಎಂದು ಪ್ರಶ್ನಿಸಿದರು.