ಬಟ್ಟೆ ಗುಂಡಿ ರೂಪದಲ್ಲಿ ಚಿನ್ನ ಅಕ್ರಮ ಸಾಗಾಟ: ವಿಮಾನ ನಿಲ್ದಾಣದಲ್ಲಿ ಆರೋಪಿ ವಶಕ್ಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಚಿನ್ನವನ್ನು ಬಟ್ಟೆ ಗುಂಡಿಗಳ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ಈತ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಅಧಿಕಾರಿಗಳು ತಪಾಸಣೆ ನಡೆಸಿದ್ದು, ಈ ವೇಳೆ ಚಿನ್ನವನ್ನು ಬಟ್ಟೆ ಗುಂಡಿಯ ರೂಪದಲ್ಲಿ ಬಟ್ಟೆಗಳಿಗೆ ಪೋಣಿಸಿ ತಂದಿರುವುದು ಪತ್ತೆಯಾಗಿದೆ. ಆರೋಪಿಯಿಂದ ಒಟ್ಟು 100 ಗ್ರಾಂ. ತೂಕದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಆರೋಪಿಯ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!