ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮುವಿನ ದೋಡಾ ಜಿಲ್ಲೆಯಲ್ಲಿ ಇಂದು ಭಾರಿ ಮೇಘಸ್ಫೋಟ ಸಂಭವಿಸಿದೆ. ದೋಡಾ ಜಿಲ್ಲೆಯ ಕಹಾರ್ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಉಂಟಾದ ದಿಢೀರ್ ಪ್ರವಾಹದಲ್ಲಿ 4 ಜನರು ಸಾವನ್ನಪ್ಪಿದ್ದಾರೆ. ಈ ಪ್ರವಾಹದಿಂದಾಗಿ ಚೆನಾಬ್ ನದಿ ಉಕ್ಕಿ ಹರಿಯುತ್ತಿದೆ.
ಕಥುವಾ ಮತ್ತು ಕಿಶ್ತ್ವಾರ್‌ನಲ್ಲಿ ಇದೇ ರೀತಿಯ ವಿಪತ್ತು ಸಂಭವಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ. ಭಾರೀ ಮಳೆಯಿಂದಾಗಿ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಥುವಾ, ಸಾಂಬಾ, ದೋಡಾ, ಜಮ್ಮು, ರಾಂಬನ್ ಮತ್ತು ಕಿಶ್ತ್ವಾರ್ ಜಿಲ್ಲೆಗಳು ಸೇರಿದಂತೆ ಜಮ್ಮು ಪ್ರದೇಶದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ನಂತರ ಈ ಘಟನೆ ಸಂಭವಿಸಿದೆ. ಪ್ರತಿಕೂಲ ಹವಾಮಾನದ ದೃಷ್ಟಿಯಿಂದ ಜಮ್ಮು ವಿಭಾಗದಾದ್ಯಂತ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ಮುಚ್ಚಲಾಗಿದೆ.