ಮೇಘಸ್ಫೋಟ: ಅಮರನಾಥ ಯಾತ್ರೆಗೆ ತೆರಳುತ್ತಿದ್ದ ಐವರ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ಜಮ್ಮು ಮತ್ತು ಕಾಶ್ಮೀರದ ಹಿಮಾಲಯ ಭಾಗದಲ್ಲಿ ಮೇಘಸ್ಫೋಟಗೊಂಡಿದೆ. ಒಂದೇ ಸಮನೇ ಸುರಿದ ಭಾರಿ ಮಳೆಗೆ ಐವರು ಅಮರನಾಥ ಯಾತ್ರಾರ್ಥಿಗಳು ನಿಧನರಾಗಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಪವಿತ್ರ ಅಮರನಾಥ ಯಾತ್ರೆಯ ಬೇಸ್ ಕ್ಯಾಂಪ್ ಬಳಿ ನದಿಗಳು ಉಕ್ಕಿ ಹರಿದಿದೆ. ಬೆಟ್ಟ ಗುಡ್ಡಗಳು ಕುಸಿದೆ. ಮರನಾಥ ಯಾತ್ರೆ ಬೇಸ್ ಕ್ಯಾಂಪ್‌ನಲ್ಲಿ ತಂಗಿದ್ದ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಗಳು ಚುರುಕುಗೊಂಡಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ನಿರಂತರ ಕಾರ್ಯನಿರ್ವಹಿಸುತ್ತಿದೆ. ಇಂದು 5.30ಕ್ಕೆ ಮೇಘಸ್ಫೋಟ ಸಂಭವಿಸಿದೆ. ಭಾರಿ ಮಳೆಗೆ ಮತ್ತೆ ಹಿಮಾಲಯ ಹಾಗೂ ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಭಾಗ ತತ್ತರಿಸಿದೆ. ವಿಪತ್ತು ನಿರ್ವಹಣಾ ತಂಡ, ಪೊಲೀಸ್ ಹಾಗೂ ಇತರ ರಕ್ಷಣಾ ತಂಡಗಳು ರಕ್ಷಣಾ ಕಾರ್ಯದಲ್ಲಿ ಸಕ್ರೀಯವಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!