ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ಮುಂಜಾನೆ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ ಪರಿಣಾಮ ಅನೇಕ ಮನೆಗಳು ಸರ್ವನಾಶವಾಗಿದ್ದು, ಹಲವರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ಶನಿವಾರ ಮುಂಜಾನೆ 1 ಗಂಟೆಯ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ. ಅವಶೇಷಗಳಡಿ ಹುಡುಗಿಯೊಬ್ಬಳು ಸಿಲುಕಿಕೊಂಡಿದ್ದು, ಪೊಲೀಸ್ ಹಾಗೂ ಎಸ್ಡಿಆರ್ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಮೇಘಸ್ಫೋಟದಿಂದ ಅನೇಕ ವಾಹನಗಳು ಹಾಗೂ ಅಂಗಡಿಗಳು ಸಹ ಜಲಸಮಾಧಿಯಾಗಿದೆ.
ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಕ್ಷಣಾ ತಂಡಗಳೊಂದಿಗೆ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ವರದಿಗಳು ತಿಳಿಸಿವೆ.
#WATCH | Uttarakhand: Due to a cloudburst in Tharali of Chamoli district, debris has entered houses, the market, and the SDM’s residence. District Magistrate and relief teams have left for the spot. Two people are reported missing: Uttarakhand Disaster Management Secretary Vinod… pic.twitter.com/V2aesFekFf
— ANI (@ANI) August 23, 2025