ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಪೋಟ, ಪ್ರವಾಹ: ಇಲ್ಲಿವರೆಗೂ ಐವರ ಮೃತದೇಹ ವಶಕ್ಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದ ನಂತರ ನಾಪತ್ತೆಯಾಗಿರುವ ಆರು ಜನರ ಶೋಧ ಕಾರ್ಯಾಚರಣೆಯನ್ನು ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳು, ಪೊಲೀಸ್ ಮತ್ತು ಗೃಹ ರಕ್ಷಕರ ಜಂಟಿ ತಂಡಗಳು ಶುಕ್ರವಾರ ಬೆಳಿಗ್ಗೆಯಿಂದ ಪುನರಾರಂಭಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದ ಕಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಬುಧವಾರ ಸಂಭವಿಸಿದ ಮೇಘಸ್ಫೋಟ ಮತ್ತು ಹಠಾತ್ ಪ್ರವಾಹದ ನಂತರ ಆರು ಮಂದಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಕಾಂಗ್ರಾ ಜಿಲ್ಲೆಯ ಜಲವಿದ್ಯುತ್ ಯೋಜನೆ ಸ್ಥಳದಿಂದ ಇಲ್ಲಿಯವರೆಗೆ ಐದು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಇತರ ಮೂವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಕುಲು ಜಿಲ್ಲೆಯ ರೆಹ್ಲಾ ಬಿಹಾಲ್‌ನಲ್ಲಿ ನಾಪತ್ತೆಯಾದ ಮೂವರಿಗಾಗಿ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಂಬಾ ಜಿಲ್ಲೆಯ ಅರಣ್ಯ ಬಳಿಯ ಕ್ಯಾಂಪ್ ನಲ್ಲಿ 13 ಜನರಿದ್ದೇವು. ಈ ಪೈಕಿ ಐವರು ಬೆಟ್ಟಗಳ ಕಡೆಗೆ ಓಡಿಹೋದರೆ, ಉಳಿದವರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ರಕ್ಷಿಸಲ್ಪಟ್ಟಿ ಕಾರ್ಮಿಕರು ತಿಳಿಸಿದ್ದಾರೆ.

ಮಳೆಯಿಂದಾಗಿ ಯೋಜನಾ ಕೆಲಸವನ್ನು ಸ್ಥಗಿತಗೊಳಿಸಲಾಗಿದ್ದು, ಯೋಜನಾ ಸ್ಥಳದಲ್ಲಿ ಹಾಕಲಾದ ತಾತ್ಕಾಲಿಕ ಶಿಬಿರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ ಪ್ರವಾಹದ ನೀರು ನಮ್ಮ ಕಡೆಗೆ ನುಗ್ಗಿತು ಎಂದು ಕಾರ್ಮಿಕರ ಹೇಳಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!