ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಜರಾತ್‌ನ ಬೊಟಾಡ್ ಜಿಲ್ಲೆಯಲ್ಲಿ 9 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಕಾರು ನದಿಯಲ್ಲಿ ಕೊಚ್ಚಿ ಹೋದ ನಂತರ ಇಂದು ಒಂದೇ ದಿನದಲ್ಲಿ 4 ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ನಾಪತ್ತೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರು ಅಪಘಾತದಲ್ಲಿ ಇಬ್ಬರು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಇನ್ನೂ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಗುಜರಾತ್ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಗೆ ಸಂಬಂಧಿಸಿದ ವಿವಿಧ ಘಟನೆಗಳಲ್ಲಿ 18 ಜನರು ಸಾವನ್ನಪ್ಪಿದ್ದು, ಇದೀಗ ಸಾವಿನ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ಸೌರಾಷ್ಟ್ರ ಮತ್ತು ಹತ್ತಿರದ ಪ್ರದೇಶಗಳಲ್ಲಿ ಭಾರಿ ಮಳೆಯು ವ್ಯಾಪಕ ಪ್ರವಾಹಕ್ಕೆ ಕಾರಣವಾಗಿದೆ. ಬಲವಾದ ಪ್ರವಾಹದಿಂದ ನಿವಾಸಿಗಳು ಕೊಚ್ಚಿ ಹೋಗುತ್ತಿರುವುದನ್ನು ತೋರಿಸುವ ಆತಂಕಕಾರಿ ದೃಶ್ಯಗಳು ಕಂಡುಬರುತ್ತಿವೆ. ಮುನ್ನೆಚ್ಚರಿಕಾ ಕ್ರಮವಾಗಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ರಕ್ಷಿಸಲು ಗುಜರಾತ್ ಜಿಲ್ಲೆಯ ಶಾಲೆಗಳನ್ನು ಮುಚ್ಚಲಾಗಿದೆ.