ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದ ಜಮತ್ಖಾನಾ, ನಿರ್ಮಂದ್ ಮತ್ತು ಅನಿ ಪ್ರದೇಶಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, 15 ವಾಹನಗಳು ಮಳೆಗೆ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
ಇಲ್ಲಿಯವರೆಗೂ ಯಾವುದೇ ಸಾವುನೋವುಗಳು ವರದಿಯಾಗಿಲ್ಲವಾದರೂ, ಅಪಾರ ಆಸ್ತಿಪಾಸ್ತಿ ನಷ್ಟವನ್ನುಂಟು ಮಾಡಿದೆ. ಶಿಮ್ಲಾ ಮತ್ತು ಕುಲ್ಲು ಜಿಲ್ಲೆಗಳ ಗಡಿಯಲ್ಲಿರುವ ಜಮತ್ಖಾನಾ ನಲಾದಲ್ಲಿ ಮೇಘಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ವರದಿಯಾಗಿದೆ.
ಶಿಮ್ಲಾದ ಹವಾಮಾನ ಕೇಂದ್ರವು ಒಂಬತ್ತು ಜಿಲ್ಲೆಗಳಿಗೆ ಮಳೆ, ಆಲಿಕಲ್ಲು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ. ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.