ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ: ಸಾವಿನ ಸಂಖ್ಯೆ 7ಕ್ಕೆ ಏರಿಕೆ, ಭಾರೀ ಮಳೆ ಎಚ್ಚರಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದ ಐದು ಸ್ಥಳಗಳಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಇದುವರೆಗೆ 7 ಮಂದಿ ಮೃತಪಟ್ಟಿದ್ದು, ಇನ್ನೂ ಕೆಲವರು ನಾಪತ್ತೆಯಾಗಿದ್ದಾರೆ.

ಧರ್ಮಶಾಲಾ ಮತ್ತು ಕುಲ್ಲು ಪ್ರದೇಶದ ಆರು ಜನರು ಕಾಣೆಯಾಗಿದ್ದಾರೆ. ಈಗಾಗಲೇ ಮನುನಿ ಖಾದ್‌ನಲ್ಲಿ ಕೊಚ್ಚಿ ಹೋಗಿದ್ದ ಓರ್ವ ಕಾರ್ಮಿಕನ ಮೃತದೇಹವನ್ನು ಹೊರತೆಗೆಯಲಾಗಿದ್ದು, ಇನ್ನುಳಿದವರಿಗಾಗಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ತಂಡಗಳು ಹಾಗೂ ಸ್ಥಳೀಯರು ಶೋಧಕಾರ್ಯ ಮುಂದುವರೆಸಿದ್ದಾರೆ.

ಜೂ.29 ರಿಂದ 30ರವರೆಗೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಇನ್ನೂ ಜು.1ರಿಂದ 3ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!