ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ. ಏಳು ಮಂದಿ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹಿಮಾಚಲ ಪ್ರದೇಶದಲ್ಲಿ ವಾರದಿಂದ ಭಾರೀ ಮಳೆ ಸುರಿಯುತ್ತಿದ್ದು, ಮೇಘಸ್ಫೋಟಕ್ಕೆ ಏಳು ಮಂದಿ ಮೃತಪಟ್ಟಿದ್ದಾರೆ.

Himachal flood: One dead, 3 injured in Kullu's cloudburst | Mintಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದ್ದು, ಮೂವರು ನಾಪತ್ತೆಯಾಗಿದ್ದಾರೆ. ಹಲವೆಡೆ ಭೂಕುಸಿತವಾಗಿದ್ದು, ಹಿಮಾಚಲ ಪ್ರದೇಶ ಮಳೆಯಿಂದಾಗಿ ಅಕ್ಷರಶಃ ನಲುಗಿದೆ.

Himachal Pradesh: Couple killed in landslide, 3 feared dead as rain  triggers flash flood | Shimla News - The Indian Expressಎರಡು ಮನೆಗಳು, ಹತ್ತಾರು ವಾಹನಗಳು ಮಳೆಗೆ ಕೊಚ್ಚಿ ಹೋಗಿವೆ. ಮಳೆಗೆ ಮನೆಗಳು ಕುಸಿದು ಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಏಳು ಮಂದಿ ಮೃತಪಟ್ಟಿದ್ದಾರೆ. ಕಳೆದ 24ಗಂಟೆಗಳಲ್ಲಿ ಬಿಡುವಿಲ್ಲದೆ ಮಳೆಯಾಗುತ್ತಿದ್ದು, ನದಿ, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿವೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!