ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಉಂಟಾಗಿದ್ದು, ಭಾರೀ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿ ಇಬ್ಬರು ಮೃತಪಟ್ಟು, 23 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯ ಮನುನಿ ಖಾದ್‌ನಲ್ಲಿ ಎರಡು ಶವಗಳನ್ನು ಹೊರತೆಗೆಯಲಾಗಿದ್ದು, ಇಂದಿರಾ ಪ್ರಿಯದರ್ಶಿನಿ ಜಲವಿದ್ಯುತ್ ಯೋಜನಾ ಸ್ಥಳದ ಬಳಿಯ ಕಾರ್ಮಿಕ ಕಾಲೋನಿಯಲ್ಲಿ ನೆಲೆಸಿದ್ದ ಸುಮಾರು 15-20 ಕಾರ್ಮಿಕರು ಖಾನಿಯಾರ ಮನುನಿ ಖಾದ್‌ನಲ್ಲಿ ದಿಢೀರ್ ನೀರಿನ ಮಟ್ಟ ಏರಿಕೆಯಾಗಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ಮಳೆಯಿಂದಾಗಿ ತಾತ್ಕಾಲಿಕವಾಗಿ ಕೆಲಸ ಸ್ಥಗಿತಗೊಳಿಸಲಾಗಿದ್ದ ಪ್ರಾಜೆಕ್ಟ್ ಸ್ಥಳದ ಬಳಿಯ ತಾತ್ಕಾಲಿಕ ಆಶ್ರಯಗಳಲ್ಲಿ ಕಾರ್ಮಿಕರು ವಿಶ್ರಾಂತಿ ಪಡೆಯುತ್ತಿದ್ದಾಗ, ಮನುನಿ ಖಾದ್ ಮತ್ತು ಹತ್ತಿರದ ಚರಂಡಿಗಳಿಂದ ಪ್ರವಾಹದ ನೀರು ನೀರು ನುಗ್ಗಿ ಕೊಚ್ಚಿ ಹೋಗಿದ್ದಾರೆ.