ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಭಾರೀ ಮೇಘಸ್ಫೋಟ ಘಟನೆ ಸಂಭವಿಸಿದ್ದು ಭಾರೀ ಸಾವು ನೋವುಗಳಾಗಿವೆ. ಕಿಶ್ತಾವಾರ್ ಜಿಲ್ಲೆಯ ಪದ್ದರ್ ಚಶೋತಿ ಎಂಬಲ್ಲಿ ಭಾರೀ ಮಳೆಯಿಂದ ಪ್ರವಾಹ ಸಂಭವಿಸಿದೆ. ಈ ದುರ್ಘಟನೆಯಲ್ಲಿ 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. 100ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ, 200ಕ್ಕೂ ಹೆಚ್ಚು ಮಂದಿ ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮೊದಲಾದವರು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಸ್ವಾತಂತ್ರ್ಯ ದಿನಾಚರಣೆಗೆ ಪೂರ್ವಭಾವಿಯಾಗಿ ಆಯೋಜಿಸಿದ್ದ ವಿವಿಧ ಕಾರ್ಯಕ್ರಮಗಳನ್ನು ಕೂಡಲೇ ರದ್ದು ಮಾಡಿದ್ದಾರೆ. ನಾಳೆಯ ಸ್ವಾತಂತ್ರ್ಯ ಚಿನಾಚರಣೆ ಕಾರ್ಯಕ್ರಮಗಳಲ್ಲೂ ಅವರು ಪಾಲ್ಗೊಳ್ಳಲು ನಿರ್ಧರಿಸಿದ್ದಾರೆ.