ಸಿಕ್ಕಿಂನಲ್ಲಿ ಮೇಘಸ್ಫೋಟ: 23 ಸೇನಾ ಸಿಬ್ಬಂದಿ ನಾಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಪ್ರವಾಹದಲ್ಲಿ 23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.
ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ.

Sikkim Floods: 23 Soldiers Missing After Cloudburst Triggers Flash Flood In Sikkimಸಿಬ್ಬಂದಿಯ ವಾಹನಗಳು ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿವೆ, ಇದೀಗ ಸಿಬ್ಬಂದಿಗಾಗಿ ಶೋಧ ನಡೆಯುತ್ತಿದೆ.
ಉತ್ತರ ಸಿಕ್ಕಿಂನ ಲ್ಹೋನಕ್ ಸರೋವರದಲ್ಲಿ ಹಠಾತ್ ಮೇಘಸ್ಫೋಟದಿಂದಾಗಿ ಪ್ರವಾಹ ಉಂಟಾಗಿದೆ, ತೀಸ್ತಾ ನದಿಯ ನೀರಿನ ಮಟ್ಟ ಹೆಚ್ಚಾಗಲು ಇದು ಕಾರಣವಾಗಿದೆ. ಅಷ್ಟೇ ಅಲ್ಲದೆ ಚುಂಗ್‌ತಾಂಗ್ ಅಣೆಕಟ್ಟಿನಿಂದ ನೀರನ್ನು ಬಿಡುಗಡೆ ಮಾಡಿದ್ದು, ಇನ್ನಷ್ಟು ನೀರು ತುಂಬಲು ಕಾರಣವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Heavy rains cause flash flood in North Sikkim; submerge National Highway 10 at Pegong | India News – India TV

ನದಿ ಉಕ್ಕಿ ಹರಿಯುತ್ತಿರುವ ಕಾರಣ ತೀಸ್ತಾ ನದಿಯ ಮೇಲಿನ ಸಿಂಥಮ್ ಕಾಲು ಸೇತುವೆ ಕುಸಿದುಬಿದ್ದಿದೆ. ಸಿಕ್ಕಿಂನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ತೀಸ್ತಾ ನದಿಯಿಂದ ದೂರ ಇರುವಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!