ಹೊಸದಿಗಂತ ಡಿಜಿಟಲ್ ಡೆಸ್ಕ್ :
ಖೀರ್ ಗಂಗಾ ನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಮಂಗಳವಾರ ಮೇಘಸ್ಫೋಟದಿಂದ ಉಂಟಾದ ವಿನಾಶಕಾರಿ ಹಠಾತ್ ಪ್ರವಾಹದಿಂದಾಗಿ ಉತ್ತರಕಾಶಿ ಜಿಲ್ಲೆಯ ಧರಾಲಿ ಗ್ರಾಮದಲ್ಲಿ ಸಂಪೂರ್ಣ ನಿರ್ನಾಮವಾಗಿದೆ. ಇದರ ಭಯಾನಕ ವಿಡಿಯೋ ಇಲ್ಲಿದೆ..
Cloudburst Tragedy in Dharali, Gangotri
Scary visuals are emerging from Dharali near Gangotri after a devastating cloudburst. Several people are feared missing, and reports of casualties have surfaced. A massive flash flood in Khir Gadh have caused significant damage in the… pic.twitter.com/UpAByEpwns
— Kumaon Jagran (@KumaonJagran) August 5, 2025
ಇದು ಗಂಗೋತ್ರಿ ಧಾಮಕ್ಕೆ ಹೋಗುವ ದಾರಿಯಲ್ಲಿ ಪ್ರಮುಖ ನಿಲ್ದಾಣವಾಗಿದೆ.ಜಿಲ್ಲಾ ಪೊಲೀಸರ ಪ್ರಕಾರ, ಹರ್ಸಿಲ್ ಪ್ರದೇಶದ ಖೀರ್ ಗಢ್ ನೀರಿನ ಮಟ್ಟ ಏರಿಕೆಯಿಂದಾಗಿ ಧರಾಲಿಯಲ್ಲಿ ಭಾರೀ ಪ್ರಮಾಣದ ಹಾನಿ ಸಂಭವಿಸಿದೆ ಎಂದು ವರದಿಯಾಗಿದ್ದು, ಬಹುತೇಕ ಈ ಗ್ರಾಮವೇ ಇರುವುದು ಅನುಮಾನ ಎಂದು ಅಂದಾಜಿಸಿದ್ದಾರೆ.
ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ , ಸೇನೆ ಮತ್ತು ಸ್ಥಳೀಯ ಅಧಿಕಾರಿಗಳ ತಂಡಗಳು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.