ಹೊಸದಿಗಂತ ಡಿಜಿಟಲ್ ಡೆಸ್ಕ್:
ಉತ್ತರಾಖಂಡದ ಪಿಥೋರಗಢ ಜಿಲ್ಲೆಯ ಲಾಸ್ಕೊ ನದಿಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, ೩೦ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ.
ಪಿಥೋರಗಢ ಜಿಲ್ಲೆಯಲ್ಲಿ ಭಾರತ ಮತ್ತು ನೇಪಾಳ ಗಡಿ ಸಮೀಪದ ಲಾಸ್ಕೋ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಮೇಘಸ್ಫೋಟಕ್ಕೆ ಒಬ್ಬರು ಮಹಿಳೆ ಮೃತಪಟ್ಟಿದ್ದಾರೆ.
ಧಾರ್ಚುಲ ಮಲ್ಲಿ ಮಾರುಕಟ್ಟೆಗೂ ಹಾನಿಯಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಪರಿಹಾರ ಕಾರ್ಯದಲ್ಲಿ ತೊಡಗಿದೆ.