WEATHER | ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ, ಸಂಜೆ ಭಾರಿ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕರ್ನಾಟಕದ ವಿವಿಧೆಡೆ ಇಂದು ಕೂಡ ಮಳೆಯಾಗಲಿದೆ. ಹಲವು ಕಡೆ ಮೋಡಕವಿದ ವಾತಾವರಣವಿದೆ. ಬಿಸಿಲ ತಾಪ ಕಡಿಮೆಯಾಗಿದೆ.

ದಕ್ಷಿಣ ಕನ್ನಡ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಏಪ್ರಿಲ್ 22ರ ಬಳಿಕ ಕರ್ನಾಟಕದಾದ್ಯಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಹೊಸಕೋಟೆ, ಬೆಳ್ಳೂರು, ಹುಣಸೂರು, ಮದ್ದೂರು, ಸರಗೂರು, ಕೃಷ್ಣರಾಜಪೇಟೆ, ದುರ್ಗ, ಚನ್ನರಾಯಪಟ್ಟಣ, ಬೆಂಗಳೂರು ಎಚ್​ಎಎಲ್​, ನಾಗಮಂಗಲ, ಬೆಂಗಳೂರು, ರಾಯಲ್ಪಾಡು, ಮೊಳಕಾಲ್ಮೂರು, ಹೆಸರಘಟ್ಟ, ಹೊಸದುರ್ಗ, ಟಿಜಿ ಹಳ್ಳಿ, ಕೋಲಾರ, ಶಿರಹಟ್ಟಿ, ಜೇವರ್ಗಿ, ಲಕ್ಷ್ಮೇಶ್ವರದಲ್ಲಿ ಮಳೆಯಾಗಿದೆ.

ಕಲಬುರಗಿಯಲ್ಲಿ 40.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಇಂದು ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 33.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!