Wednesday, February 21, 2024

ರಾಜ್ಯದ ಸ್ತಬ್ದಚಿತ್ರ ಸೇರ್ಪಡೆಗೆ ಸಿಎಂ ಮನವಿ, ರಾಜ್‌ನಾಥ್‌ಸಿಂಗ್‌ಗೆ ಪತ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜ.26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿದೆ.

ಈ ಬಗ್ಗೆ ಕನ್ನಡಿಗರಿಗೆ ಬೇಸರವಾಗಿದ್ದು, ಕರ್ನಾಟಕದ ಸ್ತಬ್ಧಚಿತ್ರಕ್ಕೆ ಅವಕಾಶ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕ ಕಳೆದ 14 ವರ್ಷಗಳಿಂದ ಪರೇಡ್‌ಗೆ ಟ್ಯಾಬ್ಲೋಗಳನ್ನು ಕಳಿಸುತ್ತಿದೆ. 14 ವರ್ಷಗಳಿಂದ ಒಂದು ವರ್ಷವೂ ಈ ಅವಕಾಶ ತಪ್ಪಿಲ್ಲ. ಈ ಬಾರಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ದೇಶಪ್ರೇಮಿ ರಾಣಿ ಚೆನ್ನಮ್ಮ ಅವರ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ನಿರಾಕರಿಸಿದ್ದು, ಕನ್ನಡಿಗರ ಮನಸ್ಸಿಗೆ ನೋವುಂಟುಮಾಡಿದೆ. ಕರ್ನಾಟಕದ ಟ್ಯಾಬ್ಲೋಗೆ ಅವಕಾಶ ನೀಡಿ ಎಂದು ಸಿಎಂ ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!