ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯ ಅಡಿಯಲ್ಲಿ ಬೆಲೆ ಕೊರತೆ ಪಾವತಿ (ಪಿಡಿಪಿ) ಯೋಜನೆಯನ್ನು ಕರ್ನಾಟಕಕ್ಕೂ ವಿಸ್ತರಿಸುವಂತೆ ಕೋರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕದಲ್ಲಿ ಮುಖ್ಯವಾಗಿ ಕಲ್ಯಾಣ ಕರ್ನಾಟಕದ ಪ್ರದೇಶದಲ್ಲಿ ಕೆಂಪು ಮೆಣಸಿನ ಕಾಯಿ ಬೆಳೆದಿರುವ ಲಕ್ಷಾಂತರ ರೈತರು ದರ ಕುಸಿತದಿಂದ ಕಂಗೆಟ್ಟಿದ್ದಾರೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದಲ್ಲಿ ಗುಂಟೂರು ಮೆಣಸಿನಕಾಯಿ ಉತ್ಪಾದನಾ ವೆಚ್ಚವನ್ನು ಕ್ವಿಂಟಾಲ್ ಗೆ12,675 ರೂಪಾಯಿಯನ್ನು ಕೃಷಿ ಬೆಲೆ ಆಯೋಗ ನಿಗದಿಪಡಿಸಿದೆ. ಆದರೆ ರೈತರು ಕ್ವಿಂಟಾಲ್ ಗೆ 8,300 ರಂತೆ ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ.
ಆಂಧ್ರಪ್ರದೇಶದಲ್ಲಿ ಪಿಡಿಪಿ ಯೋಜನೆಯನ್ನು ಅನುಮೋದಿಸಿದಂತೆ ಕರ್ನಾಟಕದ ರೈತರಿಗೂ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ.