ಸಿಎಂ ಮೆಚ್ಚುಗೆ ಯುವ ಉದ್ಯಮಿಗಳಿಗೆ ಪ್ರೇರಣೆ: ಮುರುಗೇಶ್ ನಿರಾಣಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಇಂಧನ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾರತದ ನವೀಕರಿಸಬಹುದಾದ ಇಂಧನ ಬೆಳವಣಿಗೆಯಲ್ಲಿನ ಕೊಡುಗೆಗಾಗಿ ಟ್ರೂಆಲ್ಟ್ ಬಯೋಎನರ್ಜಿಯ ವ್ಯವಸ್ಥಾಪಕ ನಿರ್ದೇಶಕ ವಿಜಯ್ ಎಂ ನಿರಾಣಿ ಅವರನ್ನು ಶ್ಲಾಘಿಸಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶ ಕೇಂದ್ರದಲ್ಲಿ ಐಇಡಬ್ಲ್ಯು ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅತಿಗಣ್ಯರ ಸಮ್ಮುಖದಲ್ಲಿ ಸಿಎಂ ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಎಂ ಶ್ಲಾಘನೆಗೆ ಧನ್ಯವಾದ ತಿಳಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ್ ಆರ್. ನಿರಾಣಿ, ‘ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಇಂಡಿಯಾ ಎನರ್ಜಿ ವೀಕ್-2023 ರಲ್ಲಿ ಅವರು ನನ್ನ ಮಗ ವಿಜಯ್ ಎಂ. ನಿರಾಣಿ ಅವರು ಭಾರತದ ನವೀಕರಿಸಬಹುದಾದ ಇಂಧನ ಬೆಳವಣಿಗೆಯ ನೀಡಿದ ಕೊಡುಗೆಯನ್ನು ಒಪ್ಪಿಕೊಂಡು ಮೆಚ್ಚುಗೆ ಸೂಚಿಸಿರುವುದು ಯುವ ಉದ್ಯಮಿಗಳಿಗೆ ಪ್ರೇರಣೆಯಾಗಿದೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!