Friday, July 1, 2022

Latest Posts

ಸಂಪುಟ ಸಹೋದ್ಯೋಗಿಗಳ ಕಾರ್ಯ ದಕ್ಷತೆ ಮೆಚ್ಚುವಂತದ್ದು: ಸಿಎಂ ಬಸವರಾಜ ಬೊಮ್ಮಾಯಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಹಾವೇರಿ:

ತಮ್ಮ ಸಚಿವ ಸಂಪುಟದಲ್ಲಿನ ಸಹೋದ್ಯೋಗಿಗಳ ಕಾರ್ಯಕ್ಷಮತೆ ದಕ್ಷತೆ, ಪ್ರತಿಭೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬುಧವಾರ ಜಿಲ್ಲೆಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ತಡಸ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಗಳಿಗೆ ಶಂಕುಸ್ಥಾಪನೆ ನೆರವೇರಿಸುವುದಕ್ಕೂ ಮುನ್ನ ಅವರು ತಡಸ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದರು.
ನನ್ನ ಸಚಿವ ಸಂಪುಟದಲ್ಲಿರು ಸಚಿವರು ಪ್ರತಿಭಾವಂತರಿದ್ದಾರೆ. ಕಾರ್ಯಕ್ಷಮತೆಯಿಂದ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಹೀಗಾಗಿ ರಾಜ್ಯದ ಜನತೆಗೆ ಉತ್ತಮ ಕಾರ್ಯಕ್ರಮಗಳನ್ನು ಕೊಡಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.
ತಡಸ ಗ್ರಾಮ ಮುಂದಿನ ದಿನಗಳಲ್ಲಿ ಪಟ್ಟಣ, ನಗರವಾಗಿ ಪರಿವರ್ತನೆಯಾಗಲಿದೆ. ಗ್ರಾಮಕ್ಲೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು. ಈಗಾಗಲೇ ಗ್ರಾಮದಲ್ಲಿ ಪದವಿಪೂರ್ವ ಕಾಲೇಜು ಇದೆ. ಮುಂದಿನ ಇಲ್ಲಿ ಪದವಿ ಕಾಲೇಜು ಸ್ಥಾಪಿಸಲಾಗುವುದು. ಹೆಣ್ಣು ಮಕ್ಕಳಿಗಾಗಿ ವಿಶೇಷ ಹೈಸ್ಕೂಲನ್ನು ತೆರೆಯಲಾಗುವುದು. ಗ್ರಾಮದ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಶಾಲೆಯನ್ನು ಆರಂಭಿಸಲು ಉದ್ದೇಶಿಸಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss