ದೆಹಲಿ ಚುನಾವಣೆಯಲ್ಲಿ ಕಲ್ಕಾಜಿ ಕ್ಷೇತ್ರದಿಂದ ಗೆಲುವಿನ ನಗೆ ಬೀರಿದ ಸಿಎಂ ಅತಿಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನವದೆಹಲಿಯಲ್ಲಿ ಇಂದು ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆದಿದ್ದು, ದೆಹಲಿಯ ಮುಖ್ಯಮಂತ್ರಿಯಾಗಿರುವ ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಗೆಲುವು ಸಾಧಿಸುವ ಮೂಲಕ ಕಲ್ಕಾಜಿ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ.

ದೆಹಲಿ ಸಿಎಂ ಗೆಲುವು ಕಂಡಿದ್ದರೂ ಈ ಬಾರಿಯ ಸಿಎಂ ಅಭ್ಯರ್ಥಿಯಾಗಿದ್ದ ಅರವಿಂದ್ ಕೇಜ್ರಿವಾಲ್ ಹೀನಾಯವಾಗಿ ಸೋಲನ್ನಪ್ಪಿದ್ದಾರೆ. ಈ ಬಾರಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದ ಆಮ್ ಆದ್ಮಿ ಪಕ್ಷವನ್ನು ದೆಹಲಿ ಮತದಾರರು ತಿರಸ್ಕರಿಸಿದ್ದಾರೆ. ದೆಹಲಿಯಾದ್ಯಂತ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, 27 ವರ್ಷಗಳ ಬಳಿಕ ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಕೇಸರಿ ಪಕ್ಷ ಅಧಿಕಾರುವುದು ಖಚಿತವಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!