ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಬಿ.ಎಸ್. ಯಡಿಯೂರಪ್ಪ ಪದಚ್ಯುತಿಗೆ ವೀರಶೈವ ಮಹಾಸಭಾ ವಿರೋಧ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಮಡಿಕೇರಿ: ಬಿ.ಎಸ್.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಪದಚ್ಯುತಗೊಳಿಸುವುದನ್ನು ವೀರಶೈವ ಲಿಂಗಾಯತ ಸಮುದಾಯ ವಿರೋಧಿಸುತ್ತದೆ ಎಂದು ಅಖಿಲ ಭಾರತ ವೀರಶೈವ
ಮಹಾಸಭಾದ ಕೊಡಗು ಜಿಲ್ಲಾ ಘಟಕರ ಅಧ್ಯಕ್ಷ ಹೆಚ್.ವಿ.ಶಿವಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೇವಲ ಒಂದು ಜಾತಿಗೆ ಸೀಮಿತವಾದ ವ್ಯಕ್ತಿಯಲ್ಲ.ಇಡೀ ಕರ್ನಾಟಕ ಕಂಡ ಧೀಮಂತ
ನಾಯಕರಾಗಿದ್ದು, ಇಂತಹ ವ್ಯಕ್ತಿಯನ್ನು ಪದಚ್ಯುತಿಗೊಳಿಸುವುದು
ಸಮಂಜಸವಲ್ಲ ಎಂದರು.

ಈಗಾಗಲೇ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಅವರು ಕೂಡಾ
ಮುಖ್ಯಮಂತ್ರಿಗಳ ಬೆಂಬಲಕ್ಕೆ ನಿಂತಿದ್ದು, ರಾಷ್ಟ್ರೀಯ ಅಧ್ಯಕ್ಷರ ನಿರ್ಧಾರಕ್ಕೆ ಸಮುದಾಯದ ಜನರು ಬದ್ಧರಾಗಿರುತ್ತೇವೆ.

ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಸಹಜ. ಅದನ್ನು ಪಕ್ಷದ ವರಿಷ್ಠರು ಚರ್ಚಿಸಿ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಬೇಕು. ಯಡಿಯೂರಪ್ಪ ಅವರು ಲಿಂಗಾಯತ ಸಮುದಾಯದ ಧೀಮಂತ
ನಾಯಕರಾಗಿದ್ದು, ಅವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ ಗೌರವದಿಂದ
ಕಾಣಬೇಕು ಎಂದು ತಿಳಿಸಿದರು.

ಕೋವಿಡ್ ಸಂದಿಗ್ಧ ಪರಿಸ್ಥಿತಿಯ ನಡುವೆಯೂ ಯುವಕರನ್ನು ನಾಚಿಸುವ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದು, ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಪಕ್ಷದ ವರಿಷ್ಠರು ಅವಕಾಶ ಕಲ್ಪಿಸಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ, ಖಜಾಂಚಿ ಉದಯ ಕುಮಾರ್, ನಿರ್ದೇಶಕ ಶುಭಶೇಖರ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss