ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಏಪ್ರಿಲ್ 16ರಂದು ಸಿಎಂ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆರೋಗ್ಯ ಸಂಬಂಧಿ, ವಿವಿಧ ಪರೀಕ್ಷೆಗಳನ್ನು ಮಾಡಲಾಗಿದ್ದು, ಕೊರೋನಾ ಮಾರ್ಗಸೂಚಿಯಂತೆ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶದಲ್ಲಿ ಸಣ್ಣ ಪ್ರಮಾಣದ ಸೋಂಕಿನ ಲಕ್ಷಣಗಳು ಕಾಣಿಸಿದೆ. ಆರೋಗ್ಯದಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ವೈದ್ಯರ ತಂಡ ಸಿಎಂ ಆರೋಗ್ಯದ ಮೇಲೆ ನಿಗಾವಹಿಸಿದೆ. ಮುಖ್ಯಮಂತ್ರಿಗಳು ಸಂಪೂರ್ಣವಾಗಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ.