ಹೊಸದಿಗಂತ ವರದಿ, ಶಿವಮೊಗ್ಗ:
ಅಭಿನಂದನಾ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಬೆಂಗಳೂರಿಗೆ ತೆರಳದೇ ನಗರದಲ್ಲೇ ಉಳಿದು ಅಚ್ಚರಿ ಮೂಡಿಸಿದ್ದಾರೆ.
ಮುಖ್ಯಮಂತ್ರಿಗಳ ನಿಗದಿತ ಕಾರ್ಯಕ್ರಮ ವೇಳಾಪಟ್ಟಿ ಪ್ರಕಾರ ಸೋಮವಾರ ಬೆಳಿಗ್ಗೆ 9.30 ಕ್ಕೆ ನಗರದ ಎನ್ಡಿವಿ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಬೆಂಗಳೂರಿಗೆ ತೆರಳಬೇಕಿತ್ತು. ಬಜೆಟ್ ಹತ್ತಿರದಲ್ಲೇ ಇರುವುದರಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ದಿಢೀರ್ ನಿರ್ಧಾರ ಬದಲಾಯಿಸಿದ ಮುಖ್ಯಮಂತ್ರಿಗಳು ಸೋಮವಾರ ಶಿವಮೊಗ್ಗದಲ್ಲೇ ತಂಗಲು ಮನಸ್ಸು ಮಾಡಿದ್ದಾರೆ. ಮಂಗಳವಾರ ಬೆಳಿಗ್ಗೆ ಬೆಂಗಳೂರಿಗೆ ತೆರಳಲಿದ್ದಾರೆ.
ಇಂದು ಸಂಜೆ ಅಭಿನಂದನಾ ಸಮಾರಂಭದ ಮುಂದುವರೆದ ಭಾಗವಾಗಿ ಮೂಡುಬಿದರೆಯ ಆಳ್ವಾಸ್ ತಂಡದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಅದರಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ.