ಏಪ್ರಿಲ್ 1ರಿಂದ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸರಕಾರಿ ಆದೇಶ ಹೊರಡಿಸಲು ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಯವ್ಯಯದಲ್ಲಿ ಘೋಷಿಸಿದ ಯೋಜನೆಗಳನ್ನು ತ್ವರಿತ ಗತಿಯಲ್ಲಿ ಅನುಷ್ಠಾನಗೊಳಿಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.

2022-23ನೇ ಸಾಲಿನ ಆರ್ಥಿಕ ವರ್ಷ ಆರಂಭದ ಮೊದಲ ದಿನವಾಗಿರುವ ಏಪ್ರಿಲ್ 1ರಿಂದಲೇ ಬಜೆಟ್ ಘೋಷಿತ ಯೋಜನೆಗಳ ಜಾರಿಗೆ ಸರಕಾರಿ ಆದೇಶಗಳನ್ನು ಹೊರಡಿಸುವಂತೆ ಸರಕಾರದ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಖುದ್ದು ಎಲ್ಲ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆದಿರುವ ಮುಖ್ಯಮಂತ್ರಿಯವರು, ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಉಲ್ಲೇಖಿಸಿ, ಈ ಕುರಿತು ಇಲಾಖೆಯಿಂದ ಯೋಜನೆಯ ರೂಪುರೇಷೆಗಳ ಕುರಿತು ಪ್ರಸ್ತಾವನೆ ಸಿದ್ಧ ಪಡಿಸಿ, ಆರ್ಥಿಕ ಇಲಾಖೆಯ ಆಯವ್ಯಯ ಸಲಹೆಯಂತೆ ಏಪ್ರಿಲ್ 1ರಿಂದಲೇ ಜಾರಿಗೆ ಬರುವಂತೆ ಸರಕಾರಿ ಆದೇಶಗಳನ್ನು ಹೊರಡಿಸುವಂತೆ ಸೂಚಿಸಿದ್ದಾರೆ.
ಅಲ್ಲದೆ, ಈ ಯೋಜನೆಗಳನ್ನು ಅತಿ ಶೀಘ್ರವಾಗಿ ಜಾರಿಗೊಳಿಸುವಂತೆ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!