ಕೇಂದ್ರ ಸಚಿವರು ಮತ್ತು ನಾಯಕರ ಭೇಟಿಗೆ ದಿಲ್ಲಿಗೆ ಪ್ರಯಾಣ ಬೆಳೆಸಿದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಮೇಕೆದಾಟು, ಮಹದಾಯಿ ಯೋಜನೆಗಳ, ಕೃಷ್ಣಾ ಮೇಲ್ದಂಡೆ, ಭದ್ರಾ ಮೇಲ್ದಂಡೆ ಸೇರಿದಂತೆ ಹಲವು ಜಲ ಯೋಜನೆಗಳ ಬಗ್ಗೆ ಚರ್ಚೆ ಮಾಡಲು ಇಂದು ಮಧ್ಯಾಹ್ನ ದಿಲ್ಲಿಗೆ ಪ್ರಯಾಣ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಆಡಳಿತಾತ್ಮಕ, ತಾಂತ್ರಿಕವಾಗಿರುವ ಕೆಲಸಗಳನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸುವಂತೆ ಕೇಂದ್ರ ಸಚಿವರನ್ನು ಒತ್ತಾಯ ಮಾಡಲಿದ್ದೇನೆ ಎಂದರು.

ನಾಳೆ ಬೆಳಗ್ಗೆ ಜಿಎಸ್ ಟಿ ವಿಚಾರದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗುವುದಾಗಿ ತಿಳಿಸಿದ ಸಿಎಂ, ಸಂಗೊಳ್ಳಿ ರಾಯಣ್ಣ ಶಾಲೆಯನ್ನು ಸೈನಿಕ ಶಾಲೆಗೆ ಸೇರ್ಪಡೆ ಮಾಡುವ ಬಗ್ಗೆ ರಕ್ಷಣಾ ಸಚಿವರ ಜೊತೆ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಕೇಂದ್ರ ಇಂಧನ ಖಾತೆ ಸಚಿವರನ್ನು ಭೇಟಿಯಾಗಲು ಸಮಯ ನಿಗದಿಯಾಗಿಲ್ಲ ಎಂದರು.

ನನಗೆ ಇದುವರೆಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರಿಂದ ಸೂಚನೆ ಬಂದಿಲ್ಲ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಯ ಸಮಯ ನಿಗದಿಯಾದಲ್ಲಿ ಅವರನ್ನೂ ಭೇಟಿಯಾಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!