ಆಜಾನ್ ಗದ್ದಲ ನಿಯಂತ್ರಣ- ಮುಖ್ಯಮಂತ್ರಿ ಬೊಮ್ಮಾಯಿ ಏನಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಆಜಾನ್ ವಿಚಾರದಲ್ಲಿ ಬಿಜೆಪಿ ಸರಕಾರ ಹೊಸ ಕಾನೂನು ತಂದಿಲ್ಲ, ಅನಗತ್ಯವಾಗಿ ಈ ವಿಚಾರವಾಗಿ ಗೊಂದಲ ಸೃಷ್ಟಿ ಬೇಡ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಿಂದು-ಮುಸ್ಲಿಂ ಧಾರ್ಮಿಕ ವಿಚಾರಗಳ ಬಗ್ಗೆ ನಡೆಯುತ್ತಿರುವ ವಿವಾದಗಳ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಸಂಘಟನೆಯಾಗಲಿ ಕಾನೂನನ್ನು ಕೈಗೆತ್ತಿಕೊಳ್ಳದಂತೆ ಶಾಂತಿ-ಸುವ್ಯವಸ್ಥೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಸರಕಾರದ ದೃಷ್ಟಿಯಲ್ಲಿ ಎಲ್ಲ ಜಾತಿ-ಧರ್ಮದವರು ಒಂದೇ ಎಂದರು.

ಹಲವಾರು ವರ್ಷಗಳಿಂದ ಈ ವಿಚಾರ ಚರ್ಚೆಯಲ್ಲಿವೆ, ಹೊಸದೇನೂ ಅಲ್ಲ. ಕೆಲವು ಆದೇಶಗಳು 2001, 2002, ಹೈಕೋರ್ಟ್ ತೀರ್ಪು ಆಧಾರದ ಮೇಲೆ ಆಗಿವೆ. ನಾವು ಇಂದಿನ ಬಿಜೆಪಿ ಸರಕಾರ ಹೊಸ ಆದೇಶ ಮಾಡಿಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು.

ಧರ್ಮವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಸಮಾಜ ಅಥವಾ ಸಂಘಟನೆ ಕಾನೂನು ಕೈಗೆತ್ತಿಕೊಳ್ಳದಂತೆ ಕಾನೂನು ಸುವ್ಯವಸ್ಥೆಗೆ ಕ್ರಮ ಕೈಗೊಳ್ಳುತ್ತೇವೆ. ದೇವಸ್ಥಾನ, ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವ ಬಗ್ಗೆ ಹೈಕೋರ್ಟ್ ಆದೇಶವಿದೆ. ಎಷ್ಟು ಡೆಸಿಮಲ್ ವರೆಗೆ ಬಳಸಬೇಕು ಹಿಂದಿನ ಆದೇಶವಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅದನ್ನು ಹಂತಹಂತವಾಗಿ ಜಾರಿಗೊಳಿಸುವ ಕೆಲಸ ನಡೆಯುತ್ತಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!