ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸ ದಿಗಂತ ಆನ್ ಲೈನ್ ಡೆಸ್ಕ್
ಕಿಚ್ಚ ಸುದೀಪ್ ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ್ದಾರೆ.
ಬೊಮ್ಮಾಯಿ ಅವರು ಸುದೀಪ್ ಅವರನ್ನು ಭೇಟಿ ಮಾಡೋದಕ್ಕೆ ಆಹ್ವಾನ ಕೊಟ್ಟಿದ್ದರಂತೆ. ಮತ್ತೊಂದೆಡೆ ಸುದೀಪ್ ಕೂಡ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಮುಖ್ಯಮಂತ್ರಿ ಆದಾಗಿನಿಂದ ಅವರಿಗೆ ಶುಭಾಶಯ ಹೇಳಲು ಆಗಿರಲಿಲ್ಲದ ಕಾರಣ ಅವರನ್ನು ಭೇಟಿಯಾಗಬೇಕಿಂದಿದ್ದರು. ಅದರಂತೆ ಆರ್ ಟಿ ನಗರದಲ್ಲಿರುವ, ಸಿಎಂ ಮನೆಗೆ ಭೇಟಿ ನೀಡಿ, ಅವರ ಜೊತೆ ಅರ್ಧ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆ ಸೌಹಾರ್ದ ಮಾತುಕತೆ ಎನ್ನಲಾಗಿದೆ.
ಬಸವರಾಜ ಬೊಮ್ಮಾಯಿ ಸಿಎಂ ಆಗುವುದಕ್ಕಿಂತ ಮುಂಚೆಯೇ ನಟ ಸುದೀಪ್ ಜೊತೆ ಒಳ್ಳೆ ಒಡನಾಟ ಹಾಗೂ ಸ್ನೇಹತ್ವವನ್ನು ಬಸವರಾಜ ಬೊಮ್ಮಾಯಿ ಹೊಂದಿದ್ದರು.