ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಹಿಂದೆ ಹೋಂ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸಿಎಂ ಬೊಮ್ಮಾಯಿ ಅವರು ಇಂದು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದು, ಅವರ ವರದಿ ನೆಗೆಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸಿಎಂ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಇಂದು ಮಣಿಪಾಲ್ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಟ್ಟಿದ್ದರು. ಈಗ ಪರೀಕ್ಷಾ ವರದಿ ಬಂದಿದ್ದು, ಅದರ ವರದಿ ನೆಗೆಟಿವ್ ಎಂದು ತಿಳಿದು ಬಂದಿದೆ. ಈ ಮೂಲಕ ಸಿಎಂ ಬೊಮ್ಮಾಯಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಇದೀಗ ಸಿಎಂ ನೇತೃತ್ವದಲ್ಲಿ ಸಭೆ ನಡೆಯಲಿದೆ.