spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, September 23, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಂ ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತ ಕೊಡುವ ವಿಶ್ವಾಸವಿದೆ: ಸಂಸದ ಬಿ.ವೈ.ರಾಘವೇಂದ್ರ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಶಿವಮೊಗ್ಗ:

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತ ನೀಡುವ ವಿಶ್ವಾಸವಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದ ಅಭಿವೃದ್ಧಿ ದೃಷ್ಠಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರು, ಶಾಸಕರನ್ನು ಭೇಟಿಯಾಗಿದ್ದಾರೆ. ಆದರೆ ಇದನ್ನು ಪ್ರತಿಪಕ್ಷಗಳು ರಾಜಕೀಯ ಟೀಕೆಗಳಿಗೆ ಬಳಸುತ್ತಿರುವುದು ಬೇಸರ ತಂದಿದೆ. ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ಬೊಮ್ಮಾಯಿ ನೂರಾರು ಕಿಮೀ ಪ್ರಯಾಣ ಮಾಡಿ ಅತಿವೃಷ್ಠಿ ಪ್ರದೇಶದ ಸಮೀಕ್ಷೆ ನಡೆಸಿದ್ದಾರೆ. ಜನರ ಸಮಸ್ಯೆ ಆಲಿಸಿದ್ದಾರೆ ಎಂದರು.
ನಮ್ಮದು ಪ್ರಬಲ ರಾಷ್ಟ್ರೀಯ ಪಕ್ಷ. ಎಲ್ಲರ ಸಹಮತದೊಂದಿಗೆ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಇದರಲ್ಲಿ ಯಡಿಯೂರಪ್ಪ ಅವರ ಹಸ್ತಕ್ಷೇಪವೇನಿಲ್ಲ. ಎಲ್ಲ ಶಾಸಕರು, ರಾಷ್ಟ್ರೀಯ ನಾಯಕರು ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಸಿಎಂ ಸ್ಥಾನಕ್ಕೇರಿಸಿದ್ದಾರೆ ಎಂದರು.
ಯಡಿಯೂರಪ್ಪ ಅವರು ಸಿಎಂ ಸ್ಥಾನದಲ್ಲಿ ಇಲ್ಲ ಎಂಬ ಮಾತ್ರಕ್ಕೆ ರಾಜ್ಯದ ಅಭಿವೃದ್ಧಿ, ಪಕ್ಷ ಸಂಘಟನೆಗೆ ಹಿನ್ನಡೆ ಆಗುವುದಿಲ್ಲ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸಂಘಟನೆ ಮಾಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. ಅಧಿಕಾರ ಇಲ್ಲದೇ ಇದ್ದರೂ ಸಂಘಟನೆ ಹಾಗೂ ಅಭಿವೃದ್ಧಿಗೆ ಅವರ ಮಾರ್ಗದರ್ಶನ ಅಮೂಲ್ಯವಾಗಿರಲಿದೆ ಎಂದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss