ತವರು ಕ್ಷೇತ್ರದಲ್ಲಿ ಮತದಾನ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಜಿಲ್ಲೆಯ ಶಿಗ್ಗಾಂವಿಯ ಮತಗಟ್ಟೆ ಸಂಖ್ಯೆ 102ರಲ್ಲಿ ಕುಟುಂಬ ಸಮೇತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತದಾನ ಮಾಡಿದ್ದಾರೆ. ಸರತಿ ಸಾಲಿನಲ್ಲಿಯೇ ಬಂದು ಓಟ್‌ ಮಾಡಿದ್ದಾರೆ.

ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯ ಮತಗಟ್ಟೆಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಅದಕ್ಕೂ ಮುನ್ನ ಹನುಮಾನ್ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಶಿಗ್ಗಾಂವ್‌ನ ಗಾಯತ್ರಿದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು. ಬಳಿಕ ಬಜರಂಗ ಬಲಿ ದೇವಸ್ಥಾನಕ್ಕೂ ಭೇಟಿ ನೀಡಿ ಪ್ರಾರ್ಥಿಸಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!