ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಸಿಎಂ ಬೊಮ್ಮಾಯಿ; ಕಬಿನಿ ಜಲಾಶಯಕ್ಕೆ ಬಾಗಿನ

ಹೊಸದಿಗಂತ ವರದಿ, ಮೈಸೂರು:
ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು.
ತಾಯಿ ಚಾಮುಂಡೇಶ್ವರಿಯ ಜನ್ಮ ದಿನವಾದ ಇಂದು ಪತ್ನಿಯೊಂದಿಗೆ ಬೆಟ್ಟಕ್ಕೆ ಆಗಮಿಸಿದ ಅವರಿಗೆ ದೇವಸ್ಥಾನದ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ದೇವಸ್ಥಾನ ಕ್ಕೆ ಆಗಮಿಸಿದ ಸಿಎಂ ಚಾಮುಂಡೇಶ್ವರಿ ಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ಕೆಲಕಾಲ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತಿತರರು ಉಪಸ್ಥಿತರಿದ್ದರು.
ಕಬಿನಿ ಜಲಾಶಯಕ್ಕೆ ಬಾಗಿನ:
ಮೈಸೂರು; ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ತುಂಬಿರುವ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬಾಗಿನ ಅರ್ಪಿಸಿದರು. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ಶಕ್ತಿ ದೇವತೆ ತಾಯಿ ಚಾಮುಂಡೇಶ್ವರಿ ಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದ ಬಳಿಕ ಹೆಲಿಕಾಪ್ಟರ್ ನಲ್ಲಿ ಕಬಿನಿ ಜಲಾಶಯ ಕ್ಕೆ ಪತ್ನಿಯೊಂದಿಗೆ ಆಗಮಿಸಿದ ಸಿಎಂ ಕಬಿನಿ ಜಲಾಶಯ ಕ್ಕೆ ಪೂಜೆ ಸಲ್ಲಿಸಿದ ಬಳಿಕ ಬಾಗಿನ ಅರ್ಪಿಸಿದರು.
ನಂತರ ಮಾತನಾಡಿ, ಕಬಿನಿ ಜಲಾಶಯ ದ ಉದ್ಯಾನವನ್ನು ಬಟಾಣಿಕಲ್ ಗಾರ್ಡನ್ ಮಾದರಿಯಲ್ಲಿ ಸರ್ಕಾರ ವೇ ಅಭಿವೃದ್ಧಿ ಪಡಿಸಬೇಕಾ, ಇಲ್ಲ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಮಾಡಬೇಕಾ ಎಂಬುದರ ಬಗ್ಗೆ ಗೊಂದಲ ಇದೆ. ಇದನ್ನು ನಿವಾರಿಸಿ, ಈ ವರ್ಷ ವೇ ಉದ್ಯಾನವನ್ನು ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು. ನಂಜುಂಡಪ್ಪ ವರದಿ ಪ್ರಕಾರ ಸರಗೂರು ಹಾಗೂ ಎಚ್.ಡಿ.ಕೋಟೆ ತಾಲೂಕುಗಳು ಹಿಂದುಳಿದಿದ್ದು, ಈ ತಾಲೂಕುಗಳ ಅಭಿವೃದ್ಧಿ ಗೆ ಕ್ರಮವಹಿಸಲಾಗುವುದು ಎಂದು ಹೇಳಿದರು. ಈ ವೇಳೆ ಸಚಿವರುಗಳಾದ ಎಸ್.ಟಿ.ಸೋಮಶೇಖರ್, ಗೋವಿಂದ ಕಾರಜೋಳ, ಶಾಸಕರಾದ ಅನಿಲ್ ಚಿಕ್ಕ ಮಾದು, ಹರ್ಷವರ್ಧನ ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!