ಹೊಸದಿಗಂತ ವರದಿ ಕಲಬುರಗಿ:
ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಗಾಣಗಾಪೂರದ ದತ್ತನ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ಪೂಜೆ ಸಲ್ಲಿಸಿ, ದತ್ತನ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ಶಶೀಲ ನಮೋಶಿ, ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ ಸಾಥ್ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದರು.