ಗೋಪೂಜೆ ಮಾಡಿ ಜನ್ಮದಿನ ಆಚರಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ಜನ್ಮದಿನದ ಅಂಗವಾಗಿ ತಮ್ಮ ಆರ್.ಟಿ. ನಗರದ ನಿವಾಸದಲ್ಲಿ ಗೋಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

ಬಳಿಕ ಬೆಂಗಳೂರಿನ ಬಾಲಬ್ರೂಯಿ ಅತಿಥಿಗೃಹದ ಪಕ್ಕದಲ್ಲಿರುವ ಶ್ರೀ ಭಗವಾನ್ ಶ್ರೀಮಾರುತಿ ದೇವಸ್ಥಾನಕ್ಕೆ ಭೇಟಿ ನೀಡಿ, ಆಂಜನೇಯನ ಆಶೀರ್ವಾದ ಪಡೆದರು. ಸಕಲ ಕರ್ನಾಟಕದ ರಾಜ್ಯದ ಜನತೆಗೆ ಒಳ್ಳೆಯದಾಗಲಿ ಎಂದು ಅರ್ಚನೆ ಮಾಡಿಸಿದರು.

ಗಣ್ಯರಿಂದ ಶುಭ ಹಾರೈಕೆ:
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿ ಇಂದಿಗೆ ಆರು ತಿಂಗಳು ಪೂರೈಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭಾಶಯ ಹಾಗೂ ಅವರ ನೇತೃತ್ವದ ಸರಕಾರಕ್ಕೆ ಆರು ತಿಂಗಳು ತುಂಬಿರುವುದಕ್ಕೆ ಶುಭಕೋರಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!