ಉಕ್ರೇನ್‌ನಲ್ಲಿ ಮೃತ ಪಟ್ಟ ರಾಜ್ಯದ ಯುವಕ: ಪೋಷಕರಿಗೆ ಕರೆ ಮಾಡಿ ಸಾಂತ್ವನ ಹೇಳಿದ ಸಿಎಂ

ಹೊಸದಿಗಂತ ಡಿಜಿಟಲ್ ಡೆಸ್ಕ್

ಬೆಂಗಳೂರು: ಉಕ್ರೇನ್‌ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಅವರ ತಂದೆ ಶೇಖರಗೌಡ ಅವರೊಂದಿಗೆ ದೂರವಾಣಿ ಮಾತನಾಡಿದ ಮುಖ್ಯಮಂತ್ರಿಗಳು, ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

ನವೀನ್ ಪಾರ್ಥಿವ ಶರೀರವನ್ನು ರಾಜ್ಯಕ್ಕೆ ತರಲು ಸಾಧ್ಯವಿರುವ ಎಲ್ಲ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮಗನ ಬಗ್ಗೆ ಮಾಹಿತಿ ನೀಡಿದ ಶೇಖರಗೌಡ ಗ್ಯಾನ ಗೌಡರ್ ಇಂದು ಮುಂಜಾನೆ ತಮ್ಮ ಮಗ ದೂರವಾಣಿ ಕರೆ ಮಾಡಿದ್ದ. ಪ್ರತಿ ದಿನ ಎರಡು ಮೂರು ಬಾರಿ ದೂರವಾಣಿ ಮೂಲಕ ಮಾತಾಡುತ್ತಿದ್ದ ಎಂದು ವಿವರಿಸಿದರು.

ನವೀನ್ ಸಾವು ಅತ್ಯಂತ ದುರಾದೃಷ್ಟಕರ. ಭಗವಂತ ನವೀನ್ ಆತ್ಮಕ್ಕೆ ಶಾಂತಿ ನೀಡಲಿ. ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!