ಹೊಸದಿಗಂತ ವರದಿ ಹುಬ್ಬಳ್ಳಿ:
ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ಚುಕ್ಕಾಣಿ ಹಿಡಿದ ಬಳಿಕ ದೇಶದ ಆಂತರಿಕ ಹಾಗೂ ಬ್ಯಾಹ ರಕ್ಷಣೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಇಸ್ಲಾಂ ರಾಷ್ಟ್ರಗಳು ಸಹ ಪ್ರಧಾನಿ ಮೋದಿಯರವ ಯೋಜನೆ ಮೆಚ್ಚುತ್ತಿವೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕಾಂಗ್ರೆಸ್ ಆಡಳಿತಾವಧಿಯಲ್ಲಿ ನಡೆದ ಭಯೋತ್ಪಾದನೆ ಚಟುವಟಿಕೆ ಹಾಗೂ ತುಷ್ಟೀಕರಣದ ರಾಜಕಾರಣ ಮುಚ್ಚಿಕೊಳ್ಳಲು ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ಹಾಗೂ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ನಾಯಕರಿಗೆ ಎಲ್ಲವನ್ನೂ ಕಾಮಾಲೆ ಕಣ್ಣಿನಿಂದ ನೋಡುವ ಚಟವಿದೆ. ದೇಶ ಒಡೆಯುವ ಕೆಲಸ ಮಾಡುತ್ತಿರುವುದು ಅವರೇ. ಮೊದಲು ಅವರು ಆಡಳಿತ ನಡೆಸುವ ರಾಜ್ಯಗಳಲ್ಲಿ ನಡೆಯುತ್ತಿರುವ ಕೋಮು ಗಲಭೆಗಳನ್ನು ತಡೆಗಟ್ಟಲಿ ಎಂದು ರಾಜ್ಯವನ್ನು ಕೋಮು ಗಲಭೆಗಳ ಪ್ರಯೋಗಾಲಯವನ್ನಾಗಿ ಮಾಡಲಾಗುತ್ತಿದೆ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದರು.