ರಾಜ್ಯದ ಹೊಸ 9 ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ : ‌

ಇಂದು ಆರಂಭಿಸಿರುವ ಎಲ್ಲ ವಿಶ್ವವಿದ್ಯಾಲಯಗಳು ಮುಂದಿನ ಭವಿಷ್ಯ ಬರೆಯುವ ಕೇಂದ್ರಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನ ಜ್ಞಾನಜ್ಯೋತಿ ವಿಶ್ವವಿದ್ಯಾನಿಲಯದ ಸಭಾಂಗಣದಲ್ಲಿ ವರ್ಚ್ಯುವಲ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯಾದ್ಯಂತ 9 ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿದರು ಮತ್ತು 7 ಇಂಜಿನಿಯರ್​​​ ಕಾಲೇಜುಗಳ ಉನ್ನತೀಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ನಮ್ಮ ಸರ್ಕಾರ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಿದೆ. ಶಿಕ್ಷಣ ಬೆಳವಣಿಗೆ ಆಗಬೇಕು. ಈ ರೀತಿಯ ವಿಶ್ವ ವಿದ್ಯಾಲಯಗಳು ದೇಶದಲ್ಲಿಯೇ ಪ್ರಥಮವಾಗಿ ಪ್ರಾರಂಭವಾಗಿವೆ. ಮುಂದಿನ ದಿನಗಳಲ್ಲಿ ಎಲ್ಲರೂ ಕರ್ನಾಟಕದ ಮಾದರಿ ಅಳವಡಿಸಿಕೊಳ್ಳುವಂತಾಗಬೇಕು ಎಂದು ಮಾತನಾಡಿದರು.

ದೇಶದಲ್ಲಿ ಉನ್ನತ ಶಿಕ್ಷಣ ಅಂದರೆ ಐಐಟಿ ಅದಕ್ಕೆ ಸಿಇಟಿ ಮೂಲಕ ಆಯ್ಕೆ ಆಗಬೇಕು. ನಮ್ಮ ಮಕ್ಕಳು ಐಐಟಿ ಮಾದರಿಯಲ್ಲಿ ಶಿಕ್ಷಣ ಪಡೆಯಬೇಕು ಎಂದು ಕೆಐಟಿ ಸ್ಥಾಪನೆ ಮಾಡಲಾಗಿದೆ. ಮುಂದಿನ ಐದು ವರ್ಷಗಳಲ್ಲಿ ಎಲ್ಲಾ ಸಂಸ್ಥೆಗಳು ಐಐಟಿ ಮಾದರಿಯಲ್ಲಿ ಇರಲಿವೆ. ಐಐಟಿ ಹುಡುಕಿಕೊಂಡು ಹೋಗುವ ಬದಲು ಇಲ್ಲಿಯೇ ಐಐಟಿ ಸೃಷ್ಟಿಸುತ್ತಿದ್ದೇವೆ. ಜಗತ್ತಿನ ಉನ್ನತ ವಿವಿಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಸಚಿವ ಮುರುಗೇಶ್ ನಿರಾಣಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!