ಬೂದಿಹಾಳ-ಪೀರಾಪೂರ ಏತ ನೀರಾವರಿ ಯೋಜನೆಗೆ ಸಿಎಂ ಚಾಲನೆ

ಹೊಸದಿಗಂತ ವರದಿ ವಿಜಯಪುರ:

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕೊಡಗಾನೂರ ಗ್ರಾಮದಲ್ಲಿ ಜಲ ಸಂಪನ್ಮೂಲ ಇಲಾಖೆ, ಕೃಷ್ಣಾ ಭಾಗ್ಯ ಜಲ ನಿಗಮ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡ ಬೂದಿಹಾಳ-ಪೀರಾಪೂರ ಏತ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಚಾಲನೆ ನೀಡಿದರು.

ಈ ಸಂದರ್ಭ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ದೇವರಹಿಪ್ಪರಗಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ, ಸಂಸದ ರಮೇಶ ಜಿಗಜಿಣಗಿ, ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸಿಂದಗಿ ಶಾಸಕ ರಮೇಶ ಬೂಸನೂರ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ರಾಜ್ಯ ಬೀಜ ಮತ್ತು ಸಾವಯವ ಪ್ರಮಾಣ ಸಂಸ್ಥೆಯ ಅಧ್ಯಕ್ಷ ವಿಜುಗೌಡ ಪಾಟೀಲ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ, ಕಾಡಾ ನಿಗಮದ ಅಧ್ಯಕ್ಷ ಶರಣಪ್ಪ ತಳವಾರ, ಕೊಡಗಾನೂರ ಗ್ರಾಪಂ ಅಧ್ಯಕ್ಷ ಬಸನಗೌಡ ಪಾಟೀಲ, ಸಿದ್ಧಲಿಂಗ‌ ದೇವರು, ಮಾಡಿವಾಳೇಶ್ವರ ಶ್ರೀಗಳು, ಸೋಮಲಿಂಗ ಸ್ವಾಮೀಜಿ, ಜಯ ಶಾಂತಲಿಂಗಮಠ ಶ್ರೀಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!