ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ಹೊಸದಿಗಂತ ವರದಿ ಮಂಗಳೂರು:

ಅನಾರೋಗ್ಯ ಹಿನ್ನೆಲೆಯಲ್ಲಿ ನಗರದ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನಳಿನ್ ಅವರು ಶೀಘ್ರವಾಗಿ ಗುಣಮುಖರಾಗುವಂತೆ ಸಿಎಂ ಶುಭ ಹಾರೈಸಿದರು.
ಸಚಿವರಾದ ಎಸ್. ಅಂಗಾರ, ಡಾ. ಅಶ್ವಥ್ ನಾರಾಯಣ್, ಮಾಜಿ ಸಿಎಂ, ಲೋಕಸಭಾ ಸದಸ್ಯ ಡಿ.ವಿ. ಸದಾನಂದ ಗೌಡ, ಶಾಸಕ ಡಾ. ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹಾಗೂ ಇತರ ಗಣ್ಯರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!